ಜಾಲಿಹಾಳದಲ್ಲಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಯುವಕನ ಕೊಲೆ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಯಾರೋ ದುಷ್ಕರ್ಮಿಗಳು ಯುವಕನೋರ್ವನನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ನಡೆದಿದೆ.

ಜಾಲಿಹಾಳ ಗ್ರಾಮದ 28 ವಯಸ್ಸಿನ ಭಾಗಪ್ಪ ತಂದಿ ಹನಮಪ್ಪ ಕ್ಯಾದಗುಂಪಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯ ಮುದೇನೂರ ರಸ್ತೆಯ ಪಕ್ಕದಲ್ಲಿ ಮೃತದೇಹ ಸೋಮವಾರ ಬೆಳಗಿನ ಜಾವ ಪತ್ತೆಯಾಗಿದೆ. ಕೊಲೆಯಾದ ವಿಷಯ ತಿಳಿಯುತಿದ್ದಂತೆ ಬೆಚ್ಚಿ ಬಿದ್ದಿರುವ ಜಾಲಿಹಾಳ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಘಟನಾ ಸ್ಥಳಕ್ಕೆ ಗಂಗಾವತಿ ಡಿಎಸ್ ಪಿ ಸಿದ್ದಲಿಂಗಪ್ಪ ಗೌಡ, ಕುಷ್ಟಗಿ ಸಿಪಿಐ ಯಶವಂತ ಬಿಸನಹಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ತಂಡ ಕೊಲೆಗಾರರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದೆ.