ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ರಾಜ್ಯ ಸರ್ಕಾರ 2022-23ನೇ ಸಾಲಿನ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ರಾಜ್ಯದಲ್ಲಿ ಒಟ್ಟು 227 ಗ್ರಾಮ ಪಂಚಾಯಿತಿಗಳ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಜಿಲ್ಲೆಯ ಏಳು ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿರುವುದು ವಿಶೇಷ.
ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮನಾಳ ಗ್ರಾಮ ಪಂಚಾಯಿತಿ, ಹಾಗೂ ಯಲಬುರ್ಗಾ ತಾಲೂಕಿನ ಗುನ್ನಾಳ, ಕುಕನೂರು ತಾಲೂಕಿನ ಮಂಗಳೂರು, ಕನಕಗಿರಿ ತಾಲೂಕಿನ ಗೌರಿಪುರ, ಕೊಪ್ಪಳ ತಾಲೂಕಿನ ಗುಳದಳ್ಳಿ, ಗಂಗಾವತಿ ತಾಲೂಕಿನ ವಡ್ಡರಹಟ್ಟಿ, ಕಾರಟಗಿ ತಾಲೂಕಿನ ಬೆನ್ನೂರು ಗ್ರಾಮ ಪಂಚಾಯಿತಿಗೆ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪಂಚಾಯತ್‌ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಪುರಸ್ಕಾರಕ್ಕೆ ಈ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.