ಕೊಪ್ಪಳ ಜಿಲ್ಲೆಯ ನಾಲ್ವರು ರೈತರಿಗೆ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಕೃಷಿ ಇಲಾಖೆಯಿಂದ ಜಿಲ್ಲೆಯ ನಾಲ್ವರು ರೈತರು 2022-23ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಯಡಿ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿ ಪಡೆದುಕೊಂಡಿರುತ್ತಾರೆ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ.

ಜಿಲ್ಲೆಯ ಗಂಗಾವತಿ ತಾಲೂಕಿನ ಆರ್ಹಾಳ ಗ್ರಾಮದ ವೀರಣ್ಣಗೌಡ ರುದ್ರಗೌಡ ಕುಲಕರ್ಣಿ, ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದ ಸುರೇಶ ಬಿನ್ ಸಣ್ಣಪ್ಪ ಚೌಡ್ಕಿ, ಕೊಪ್ಪಳ ತಾಲೂಕಿನ ಕಾಮನೂರು ಗ್ರಾಮದ ಬಸಪ್ಪ ಬಿನ್ ಅಯ್ಯಪ್ಪ ಹೊಕಲಕುಂಟಿ ಹಾಗೂ ಕುಷ್ಟಗಿ ತಾಲೂಕಿನ ಬೆನಕನಾಳ ಗ್ರಾಮದ ಶೇಖರಪ್ಪ ಹನುಮಪ್ಪ ಅಗಸರ ಅವರು 2022-23ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಯಡಿ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ ಹಾಗೂ 50,000 ರೂ.ಗಳ ಬಹುಮಾನದ ಮೊತ್ತಕ್ಕೆ ಅರ್ಹರಾಗಿರುತ್ತಾರೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.