ಮಹಾಂತೇಶ ಚಕ್ರಸಾಲಿ
ಕೃಷಿಪ್ರಿಯ ನ್ಯೂಸ್ |
ಕುಷ್ಟಗಿ: ತಾಲೂಕಿನ ಹನುಮನಾಳ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆಯಿತು.
12 ಜನ ಸದಸ್ಯರ ಬಲ ಹೊಂದಿರುವ ಈ ಗ್ರಾಮ ಪಂಚಾಯಿತಿಗೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಜಾತಾ ತೆವರಪ್ಪ ಚಿಕ್ಕನಾಳ ಹಾಗೂ
ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲವ್ವ ನಿಂಗಪ್ಪ ಭಜೇಂತ್ರಿ ಇವರು ಆಯ್ಕೆಯಾಗಿದ್ದಾರೆ.
ಎರಡೂ ಸ್ಥಾನಗಳಿಗೆ ಒಂದರಂತೆ ನಾಮಪತ್ರ ಸಲ್ಲಿಕೆಯಾಗಿದ್ದವು. ಪ್ರತಿಸ್ಪರ್ಧಿ ಇರದ ಕಾರಣ ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತು ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಕೆ.ಶರಣಪ್ಪ ಅವರು ಘೋಷಣೆ ಮಾಡಿದರು.
ಸಹಾಯಕ ಚುನಾವಣಾಧಿಕಾರಿಯಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಹಿರೇಮಠ ಅವರು ಕಾರ್ಯನಿರ್ವಹಿಸಿದರು. ಈ ವೇಳೆ ಪಂಚಾಯಿತಿ ಕರ ವಸೂಲಿಗಾರ ಶರಣಪ್ಪ ಕುರುಮನಾಳ, ಕಂಪ್ಯೂಟರ್ ಆಪರೇಟರ್ ಮಂಜುನಾಥ ಸಿಕೆ ಸೇರಿದಂತೆ ಸಿಬ್ಬಂದಿ ಇದ್ದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸರ್ವ ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿ ಮತ್ತು ಸಾರ್ವಜನಿಕರು ಗೌರವಿಸಿದರು.