ಪದವೀಧರ ಪ್ರಾಥಮಿಕ ಶಿಕ್ಷಕ ಅಭ್ಯರ್ಥಿಗಳಿಗೆ ‘ಸಿಹಿ’ ಸುದ್ದಿ !

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಪದವೀಧರ ಪ್ರಾಥಮಿಕ ಶಿಕ್ಷಕ ಅಭ್ಯರ್ಥಿಗಳ ನೇಮಕಾತಿಗೆ ನ.4ರಿಂದ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ದಿನಾಂಕ 01-11-2023 ರಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ನ.4ರಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ.

ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಸೇರಿದ ಪದವೀಧರ ಶಿಕ್ಷಕ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಶಾಸಕರು ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.