3.800 ಕ.ಕರ್ನಾಟಕ ಪದವೀಧರ ಪ್ರಾಥಮಿಕ ಶಿಕ್ಷಕ ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ ಪೂರ್ಣ : ಬಯ್ಯಾಪೂರು

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಒಟ್ಟು 5 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕ ಅಭ್ಯರ್ಥಿಗಳ ನೇಮಕಾತಿಯಲ್ಲಿ ಶನಿವಾರ 3.800 ಕೌನ್ಸಿಲಿಂಗ್ ಪ್ರಕ್ರಿಯೆ ಸುರಕ್ಷಿತ ಹಾಗೂ ಶಾಂತ ರೀತಿಯಿಂದ ಪೂರ್ಣಗೊಂಡಿದೆ ಎಂದು ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರು ಅವರು ಹೇಳಿದರು.

ಈ ಕುರಿತು ಜಿಲ್ಲೆಯ ಕುಷ್ಟಗಿ ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಭಾನುವಾರ ಮಾಧ್ಯಮಕ್ಕೆ ಮಾಹಿತಿ ನೀಡಿ, ರಾಜ್ಯ ಸರ್ಕಾರ ಕರೆದಿದ್ದ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 5 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿತ್ತು. ಸದ್ಯ ಈ ಪೈಕಿ 3,800 ಶಿಕ್ಷಕ ಹುದ್ದೆಗಳಿಗೆ ಮಾತ್ರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗಿದೆ. ಇನ್ನುಳಿದ ಅಭ್ಯರ್ಥಿಗಳು ಮೆರಿಟ್ ಆಧಾರದ ಮೇರೆಗೆ ಹೊರಗುಳಿದು ಸ್ವಲ್ಪ ಮಟ್ಟಿಗೆ ತೊಂದರೆ ಅನುಭವಿಸುವಂತಾಗಿದೆ.

ಕಾರಣ ಕಳೆದ ವರ್ಷ ನಮ್ಮ ಭಾಗದಿಂದ ತೆಗೆದುಕೊಂಡ ಕ್ಯಾಬಿನೆಟ್ ಉಪಸಮಿತಿ ನಿರ್ಧಾರದಿಂದ ಬಹುಜನರಿಗೆ ಲಾಭವಾಯಿತು ಇನ್ನುಳಿದವರು ತೊಂದರೆ ಅನುಭವಿಸುವಂತಾಯಿತು. ಈ ಕುರಿತು ಅಭ್ಯರ್ಥಿಗಳು ನ್ಯಾಯಾಲಯ ಮೊರೆ ಹೋಗಿದ್ದಾರೆ. ಈ ಕುರಿತು ಪರಿಹಾರ ಕಂಡುಕೊಳ್ಳಲು ತಾವು ಸೋಮವಾರ ಬೆಂಗಳೂರಿಗೆ ತೆರಳಿ ಇಲಾಖೆಯ ಅಧಿಕಾರಿಗಳಲ್ಲಿ ಮಾಹಿತಿ ಪಡೆದು ಪ್ರಯತ್ನ ನಡೆಸುವ ಯೋಚನೆಯಲಿದ್ದೇನೆ. ಶೀಘ್ರದಲ್ಲೇ ಪರಿಹಾರ ದೊರೆತು ಕಲ್ಯಾಣ ಕರ್ನಾಟಕ ಭಾಗಕ್ಕೆ ಇನ್ನೂ ಹೆಚ್ಚಿನ ಶಿಕ್ಷಕರು ಲಭ್ಯವಾಗಲಿದ್ದಾರೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕೊರತೆ ತುಂಬಲು ಹಿಂದಿನ ಮತ್ತು ಈಗಿನ ಸರ್ಕಾರ ಬಹಳಷ್ಟು ಆಸಕ್ತಿವಹಿಸಿವೆ. ಇಂದಿನ ಸರ್ಕಾರದ ಕಲ್ಯಾಣ ಕರ್ನಾಟಕ ಭಾಗದ ಆರು ಜನ ಮಂತ್ರಿಗಳ ಜೊತೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹಾಗೂ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಆಸಕ್ತಿ ವಹಿಸಿ ಕೋರ್ಟಿನಲ್ಲಿದ್ದ ಪ್ರಕರಣಗಳನ್ನು ಸರ್ಕಾರಿ ವಕೀಲರ ಮುಖಾಂತರ ಸರಿಪಡಿಸುವ ಕೆಲಸ ಮಾಡಿದ್ದಾರೆ ಎಂದ ಬಯ್ಯಾಪೂರ, ಅವರಿಗೆ ಧನ್ಯವಾದಗಳನ್ನು ಸಲ್ಲಿಸುವ ಮುಖಾಂತರ ಸದ್ಯ ಇನ್ನುಳಿದಿರುವ ಸಣ್ಣಪುಟ್ಟ ಅಡೆತಡೆಗಳನ್ನು ನಿವಾರಿಸುವಂತೆ ಮನವಿ ಮಾಡಿದರು.