ಭಾರತೀಯ ಸಂಸ್ಕೃತಿ, ಸಾಹಿತ್ಯ, ಕಲೆ, ಕೃಷಿ ಚಟುವಟಿಕೆ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯೋನ್ಮುಖ : ಮಹೇಶ ಜಿ.ಹೆಚ್.

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಡಾ.ವೀರೇಂದ್ರ ಹೆಗ್ಗಡೆ ಅವರು ಸ್ಥಾಪಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಭಾರತೀಯ ಸಂಸ್ಕೃತಿ, ಸಾಹಿತ್ಯ, ಕಲೆ, ಕೃಷಿ ಚಟುವಟಿಕೆಗಳು ಹೀಗೆ ಹತ್ತು ಹಲವು ಉದ್ದೇಶಗಳಿಗೆ ಸ್ವ-ಸಹಾಯ ಸಂಘಗಳ ಮುಖಾಂತರ ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಲ್ಲಿ ಸದಾ ತೊಡಗಿಕೊಂಡಿದೆ ಎಂದು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಮಹೇಶ ಜಿ.ಹೆಚ್. ಅವರು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ಜಿಲ್ಲೆಯ ಕುಷ್ಟಗಿ ತಾಲೂಕು ಚಳಗೇರಾ ವಲಯದ ನಿಡಶೇಸಿ ಗ್ರಾಮದ ಶ್ರೀಮಠದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿದರು.

ಸರ್ಕಾರದಿಂದ ಆಗದ ಕಾರ್ಯವನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸ್ವಸಹಾಯ ಸಂಘಗಳ ಒಕ್ಕೂಟದಿಂದ ಕಳೆದ 43 ವರ್ಷಗಳಿಂದ ಜಾತಿ, ಧರ್ಮ ಎಣಿಸದೇ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆತ್ತುವಲ್ಲಿ ಸದಾ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.

ಇದೇ ವೇಳೆ ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಂಕೇತಿಕವಾಗಿ 5000/- ರೂಪಾಯಿ ಅನುದಾನ ವಿತರಿಸಲಾಯಿತು. ಹಾಗೆ ಅರೋಗ್ಯ ರಕ್ಷಾ ಕಾರ್ಯಕ್ರಮದಡಿಯಲ್ಲಿ 12000/- ರೂಪಾಯಿ ಅನುದಾನ ವಿತರಣೆ ಮಾಡಲಾಯಿತು.

ಶ್ರೀಮಠದ ಮರಿ ದೇವರಾದ ವಿಶ್ವರಾಧ್ಯ ಶ್ರೀಗಳು ದಿವ್ಯಸಾನ್ನಿಧ್ಯದಲ್ಲಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕೊಪ್ಪಳ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಅವರು ವರಮಹಾಲಕ್ಷ್ಮಿ ಪೂಜೆ ಹಬ್ಬ ಆಚರಣೆ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ಪೂಜಾ ಸಮಿತಿಯವರು ಸಾಮೂಹಿಕವಾಗಿ ವರಮಹಾಲಕ್ಷ್ಮಿ ಪೂಜೆ ನೆರವೇರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ ಕರಿಯಪ್ಪ ಹಿರೇಮನಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪರುಶುರಾಮ್ ಸಿಂಗ್ ಪೂಜಾರ್ ಮತ್ತು ಗ್ರಾಮ ಪಂಚಾಯಿತಿ ಸರ್ವಾ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಶೇಖರ ನಾಯಕ, ಕೃಷಿ ಮೇಲ್ವಿಚಾರಕ ರವಿಚಂದ್ರ ಮತ್ತು ವಲಯ ಮೇಲ್ವಿಚಾರಕ ಪ್ರವೀಣ, ಸೇವಾ ಪ್ರತಿನಿಧಿ ಮಂಜುನಾಥ ಕಾರ್ಯಕ್ರಮ ನಿರ್ವಹಿಸಿದರು.