ಕುಷ್ಟಗಿ ಬಳಿ ವ್ಯಕ್ತಿ ತಲೆ ಕಡಿದು ಕೊಲೆ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಜಿಲ್ಲೆಯ ಕುಷ್ಟಗಿ ಸಮೀಪದ ರಾಷ್ಟೀಯ ಚತುಷ್ಪಥ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೋರ್ವನ ತಲೆ ಕಡಿದು ಬರ್ಬರವಾಗಿ ಕೊಲೆ ಮಾಡಿದ ಬೆತ್ತಲೆ ಮೃತದೇಹ ಡಿ.09 ಶನಿವಾರ ಪತ್ತೆಯಾಗಿದೆ.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಕಲ್ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿ ಕಡೆಕೊಪ್ಪ ಬಳಿಯ ಜಮೀನಿನೊಂದರಲ್ಲಿ ಈ ಮೃತದೇಹ ಪತ್ತೆಯಾಗಿದೆ.
ಕೊಲೆಯಾದ ವ್ಯಕ್ತಿ ಇಳಕಲ್ಲ ಮೂಲದ ಭೀಮರಾವ್ ಸುರೇಶ ಮಬ್ರುಂಕರ (32) ಆಟೋ ಚಾಲಕ ಎನ್ನಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ಯಶೋಧಾ ವಂಟಿಗೋಡಿ, ಸಿಪಿಐ ಯಶವಂತ ಬಿಸನಳ್ಳಿ, ಪಿಎಸೈ ಮುದ್ದುರಂಗಸ್ವಾಮಿ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಶೋಧ ಕಾರ್ಯ ಕೈಗೊಂಡಿದೆ.