ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಗ್ರಾಮದ ನಿವಾಸಿ ತಂಬೂರಿ ಕಲಾವಿದ ಹನುಮಂತ ತಂದೆ ಹನುಮಂತಪ್ಪ ಚನ್ನದಾಸರ (43) ಅನಾರೋಗ್ಯ ಕಾರಣದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು, ಒರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ, ಮಿತ್ರರನ್ನು ಅಗಲಿದ್ದಾರೆ. ಇಂದು ಸಂಜೆ ಗ್ರಾಮದ ರುದ್ರ ಭೂಮಿಯಲ್ಲಿ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತ ತಂಬೂರಿ ಕಲಾವಿದ ಹನುಮಂತ ಚೆನ್ನದಾಸರ ಅವರ ಅಗಲಿಕೆಗೆ ಚೆನ್ನದಾಸರ ಸಮುದಾಯ ಸೇರಿದಂತೆ ಗ್ರಾಮದ ಗುರು ಹಿರಿಯರು, ಜನಪ್ರತಿನಿಧಿಗಳು, ಕಲಾವಿದರು ಕಂಬನಿ ಮಿಡಿದಿದ್ದಾರೆ.