ರಾಷ್ಟ್ರೀಯ ಸೇವಾ ಯೋಜನೆ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಡಾ.ನಾಗರಾಜ ಹೀರಾ ನೇಮಕ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ರಾಷ್ಟ್ರೀಯ ಸೇವಾ ಯೋಜನೆ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಜಿಲ್ಲೆಯ ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಡಾ.ನಾಗರಾಜ ಹೀರಾ ಅವರನ್ನು ನೇಮಕ ಮಾಡಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಷ್ಟ್ರೀಯ
ಸೇವಾಯೋಜನೆ ರಾಜ್ಯ ಸಂಯೋಜನಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ರಾಜ್ಯದಲ್ಲಿ ಒಟ್ಟು 33 ಜಿಲ್ಲೆಗಳಿಗೆ ರಾಷ್ಟ್ರೀಯ ಸೇವಾಯೋಜನೆ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಘಟಕಾಧಿಕಾರಿಯಾದ ಡಾ.ನಾಗರಾಜ ಹೀರಾ ಅವರು ಜಿಲ್ಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಡುವ ಮೂಲಕ ಗಮನ ಸೆಳೆದಿದ್ದರು. ಅವರ ಕಾರ್ಯವೈಖರಿಯನ್ನು ಪರಿಗಣಿಸಿ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದ್ದಾರೆ.

ಡಾ.ನಾಗರಾಜ ಹೀರಾ ಅವರಿಗೆ ಅರಸಿ ಬಂದ ಹೊಸ ಜವಾಬ್ದಾರಿ ಕುರಿತು ಅವರ ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕ ಬಳಗ ಸೇರಿದಂತೆ ಅವರ ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದಾರೆ.