ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಕೃಷಿ ಇಲಾಖೆ ಕೊಪ್ಪಳ ವತಿಯಿಂದ ಜಿಲ್ಲಾ ಮಟ್ಟದ “ಸಿರಿಧಾನ್ಯ ಹಬ್ಬ” ಮತ್ತು ರೈತರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಡಿ.23ರ ರಂದು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ತಾಲ್ಲೂಕ ಸಹಾಯಕ ಕೃಷಿ ನಿರ್ದೇಶಕ ಅಜ್ಮೀರ್ ಅಲಿ ಅವರು ನೀಡಿದ ಮಾಹಿತಿಯಲ್ಲಿ,
ಸಾವಯವ ಮೇಳ 2024ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ “ಸಿರಿಧಾನ್ಯ ಹಬ್ಬ” ಮತ್ತು ರೈತರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ. ಸಿರಿಧಾನ್ಯ ಹಬ್ಬದ ಪ್ರಯುಕ್ತ ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳಿಂದ ಸಿರಿಧಾನ್ಯ ಮಹತ್ವ ಮತ್ತು ಮೌಲ್ಯ ವರ್ದನೆ ಬಗ್ಗೆ ವಿಚಾರ ಗೋಷ್ಠಿ ನಡೆಯಲಿದೆ.
ಅಂದು ಜಿಲ್ಲೆಯ ಎಲ್ಲಾ ರೈತ ಬಾಂಧವರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.