ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: 2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ಕುಷ್ಟಗಿ ತಾಲೂಕಿನ ರೈತ ಭಾಂದವರು ಡಿಸೆಂಬರ್ 31ರೊಳಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷಿ ಇಲಾಖೆ ಸಹಾಯ ಕೃಷಿ ನಿರ್ದೇಶಕ ಅಜ್ಮೀರ ಅಲಿ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಗಸೂಚಿ ಅನ್ವಯ ಕ್ಷೇತ್ರ ಪರಿಶೀಲಿಸಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ಯಾವುದೇ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದರೆ ಸದರಿ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ. ಡಿಸೆಂಬರ್ 31 ರೊಳಗಾಗಿ ಆಸಕ್ತ ರೈತರು ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು., ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಜೊತೆಗೆ ಕೆ ಕಿಸಾನ್ ತಂತ್ರಾಂಶದ ಮೂಲಕ ಸೌಲಭ್ಯವನ್ನು ಒದಗಿಸುತ್ತಿರುವುದರಿಂದ ರೈತರು ಸಹಕರಿಸಬೇಕು ಎಂದು ಕೋರಿದ್ದಾರೆ.