ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಕುಷ್ಟಗಿ ತಾಲೂಕಿನ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕೊಪ್ಪಳ ತಾಲೂಕಿನ ಟಣಕನಕಲ್ಲು ಆದರ್ಶ ವಿದ್ಯಾಲಯದಲ್ಲಿ ಡಿ.27 ರಂದು ಬುಧವಾರ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯಿಂದ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಕಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ 14 ಸ್ಪರ್ಧೆಗಳು ಮತ್ತು ಪ್ರೌಢಶಾಲೆಗಳ ವಿಭಾಗದಲ್ಲಿ 16 ವಿವಿಧ ಸ್ಪರ್ಧೆಗಳು ಜರುಗಿದವು.
ಕುಷ್ಟಗಿ ತಾಲೂಕಿನ ಕ್ರೈಸ್ತ ದಿ ಕಿಂಗ್ ಪ್ರೌಢಶಾಲೆಯ
ಆರನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಜಾಹಿದ್ ವಾಲಿಕಾರ್ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಮತ್ತು ಅದೇ ಶಾಲೆಯ 8 ರಿಂದ 10 ನೇ ತರಗತಿ ವಿಭಾಗದಲ್ಲಿ ಕುಮಾರಿ ಸೈಮಾ ಪರ್ವೇಜ್ ಹಿಂದಿ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಜಿಲ್ಲಾ ಮಟ್ಟದ ಕಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಸೇರಿದಂತೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಗುರುಗಳು ಮತ್ತು ಶಿಕ್ಷಕ ವರ್ಗ ಅಭಿನಂದಿಸಿದ್ದಾರೆ.