ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ : ಜಿ.ಪಂ. ಉಪ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಮಲ್ಲಪ್ಪ ತೊದಲಭಾಗಿ ಅವರು ಜ.6 ರಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಗುಪ್ಪಿ ಗ್ರಾಮ ಪಂಚಾಯತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಪಂಚಾಯಿತಿ ವ್ಯಾಪ್ತಿಯ ಗ್ವಾತಗಿ ಗ್ರಾಮದ ಬಳಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾರ್ಯ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಯೋಜನೆ ಕುರಿತು ಕೂಲಿಕಾರರೊಂದಿಗೆ ಚರ್ಚಿಸಿದರು.
ಈ ವೇಳೆ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ನಿಂಗನಗೌಡ ವಿ ಹಿರೇಹಾಳ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎ ಇ ಇ ವಿಜಯಕುಮಾರ್, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಹಾಗೂ ಕೂಲಿಕಾರರು ಹಾಜರಿದ್ದರು.